ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ಕೊಡುವ ವಿಚಾರವಾಗಿ ನೀಡಿದ ಹೇಳಿಕೆಯನ್ನು ಕೆಲವು ಮಾಧ್ಯಮಗಳು ತಪ್ಪಾಗಿ ಅರ್ಥ ಮಾಡಿಕೊಂಡು ತಿರುಚಿವೆ. ವಾಸ್ತವವಾಗಿ ನನಗೆ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ಕೊಡುವ ವಿಚಾರದ ಬಗ್ಗೆ ತಪ್ಪಾದ ಮಾಹಿತಿ ದೊರಕಿತ್ತು. ಅದಕ್ಕೆ ತಕ್ಕ ಹಾಗೆ ನಾನು ಉತ್ತರಿಸಿರುವೆ. ಮಾಧ್ಯಮಗಳು ನನ್ನ ಅಭಿಪ್ರಾಯವನ್ನು ತಿರುಚಿವೆ ಎಂದು ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಸಾಮೂಹಿಕವಾಗಿ ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತಿದೆ. ಈ ಬಗ್ಗೆ ನಿಮ್ ಅಭಿಪ್ರಾಯವೇನು ಎಂದು ಕೇಳಲಾಗಿತ್ತು. ಇದಕ್ಕೆ ಸಹಜವಾಗಿ ಆಹಾರದ ಹಕ್ಕು, ಸ್ವಾತಂತ್ರ್ಯ ಎಲ್ಲರಿಗೂ ಇದೆ ಸಸ್ಯಹಾರಿಗಳಿಗೆ ಮೊಟ್ಟೆ ತಿನ್ನಿಸುವ ಕೆಲಸ ಅಗಬಾರದು. ಶಾಲೆಯಲ್ಲಿ ಕೆಲವರಿಗೆ ಮೊಟ್ಟೆ ವಿತರಣೆ, ಕೆಲವರಿಗೆ ನೀಡದಿರುವುದು ಮತಭೇದಕ್ಕೆ ಕಾರಣವಾಗುತ್ತದೆ. ಹೀಗಾಗಿ ಶಾಲೆಯಲ್ಲಿ ಸಾಮೂಹಿಕವಾಗಿ ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದೆ. ಆದರೆ ಶಾಲೆಯಲ್ಲಿ ಮೊಟ್ಟೆ ತಿನ್ನುವವರಿಗೆ ಮೊಟ್ಟೆ ಕೊಡುತ್ತಾರೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡುತ್ತಾರೆ ಎನ್ನುವ ವಿಚಾರ ನಂತರ ತಿಳಿಯಿತು.
ಪೂರ್ತಿಯಾಗಿ ವಿಚಾರವನ್ನು ನಮಗೆ ತಿಳಿಸದೆ ಮೊಟ್ಟೆ ಹಂಚುವ ಕುರಿತು ಅಭಿಪ್ರಾಯವೇನು ಎಂದು ಅರ್ಧ ಸತ್ಯ ಕೇಳಲಾಗಿದೆ. ಅದಕ್ಕೆ ತಕ್ಕ ಹಾಗೆ ನಾನು ಉತ್ತರ ನೀಡಿದ್ದೇನೆ. ಸಮಾಜದ ಮುಂದೆ ನಮ್ಮ ಅಭಿಪ್ರಾಯ ಮುಂದಿಟ್ಟು ಶಾಲೆಯಲ್ಲಿ ಬಡ, ಆಶಕ್ತ, ದುರ್ಬಳ ಮಕ್ಕಳಿಗೆ ಮೊಟ್ಟೆ ಕೊಡುವುದನ್ನು ವಿರೋದಿಸುತ್ತಿದ್ದಾರೆ. ಪೂರ್ತಿ ವಿಚಾರ ತಿಳಿಸದೆ ತಮ್ಮ ಅಭಿಪ್ರಾಯ ಏನು ಎಂದು ಕೇಳುವ ಮೂಲಕ ಜನಸಮೂಹವನ್ನ ಎತ್ತಿಕಟ್ಟುವ ಕೆಲಸ ನಡೆದಿದೆ ಸಮಾಜ ಸಂಘಟಿಸುವ ಕಾರ್ಯ ನಡೆಯಬೇಕು ಹೊರತು ಸಮಾಜ ಒಡೆಯುವ ಕೆಲಸ ನಡೆಯಬಾರದು. ಒಂದು ವರ್ಗವನ್ನು ಹಿಯಾಳಿಸುವ ಕೆಲಸ ಮಾಡಬಾರದು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.
1 Comment
אין ספק כי גברים רבים בישראל ובעולם כולו זקוקים לפתרון זמין, נגיש ומהיר השפעה שיתן להם מענה דירות דיסקרטיות בירושלים