ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ದುಬೈಯಿಂದ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸಲೆತ್ನಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಹೊರಟ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮಂಗಳವಾರ ನಸುಕಿನಜಾವ 2 ಗಂಟೆ ಸುಮಾರಿಗೆ ಮಂಗಳೂರು ವಿಮಾಣ ನಿಲ್ದಾಣ ತಲುಪಿದೆ. ತಪಾಸಣೆ ವೇಳೆ ಪ್ರಯಾಣಿಕನೊಬ್ಬನಲ್ಲಿ 364 ಗ್ರಾಂ ತೂಕದ 17.54 ಲಕ್ಷ ರೂ. ಮೌಲ್ಯದ ಶುದ್ಧ ಚಿನ್ನವು ದ್ರವರೂಪದಲ್ಲಿ ಪತ್ತೆಯಾಗಿದೆ. ಇದನ್ನು ಗಮ್‌ನೊಂದಿಗೆ ಮಿಶ್ರಣ ಮಾಡಿ, ಕಂದು ಬಣ್ಣದ ಶೀಟ್‌ವೊಂದರಲ್ಲಿ ಪ್ರಯಾಣಿಕ ಅಡಗಿಸಿಟ್ಟಿದ್ದ. ಇದನ್ನು ಟ್ರಾಲಿಯ ಕೆಳಭಾಗದ ಎರಡು ಪದರುಗಳ ಆಳದಲ್ಲಿ ಇರಿಸಿ, ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಎಂದು ತಿಳಿದುಬಂದಿದೆ.
ಸದ್ಯ ಈತನನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
3 Comments
Игра в кальмара 2 сезон 1 серия
Игра в кальмара 2 сезон 1 серия
Игра в кальмара 2 сезон 1 серия