ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಮರವೊಂದು ನಿಂತಿದ್ದ ಕಾರಿನ ಮೇಲೆ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆ ಹೋಗುವ ಕಾರಿನಲ್ಲಿ ಇದ್ದಕ್ಕಿದ್ದಂತೆ ಶಬ್ದ ಕೇಳಿ ಬಂತು. ಕಾರು ನಿಲ್ಲಿಸಿದ ಚಾಲಕ ಇಳಿದು ಕಾರಿನ ಬಾನೆಟ್ ತೆಗೆದು ಪರಿಶೀಲನೆ ನಡೆಸುತ್ತಿರುವ ವೇಳೆಯಲ್ಲಿ ಒಮ್ಮಿಂದೊಮ್ಮೆಲೆ ರಸ್ತೆ ಬದಿಯ ಮರ ವ್ಯಕ್ತಿಯ ಮೇಲೆ ಬಿದ್ದು ಈ ಅವಘಡ ಸಂಭವಿಸಿದೆ.
ಕಾರಿನಲ್ಲಿ ಮೃತ ವ್ಯಕ್ತಿಯ ಕುಟುಂಬಸ್ಥರು ಇದ್ದರು ಎಂದು ತಿಳಿದುಬಂದಿದೆ. ಕಾರು ನಜ್ಜುಗುಜ್ಜಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
3 Comments
Hey!! I wanna know more about this please it’s urgent
תמונות אמיתיות באחריות בחורה הכי סקסית במרכז הארץ זמינה…
חברת יגואר און מייצרת תחליפים מן הטבע כפתרון לבעיות און גברי, אימפוטנציה, אי סיפוק מיני ובעיות שונות הקשורות בחיי המין.