ಮಂಗಳೂರು: ಅನಿವಾಸಿ ಭಾರತೀಯರ ಇಂಡಿಯನ್ ಓವರ್ಸೀಸ್ ಸಂಘಟನೆಯ ವತಿಯಿಂದ ಕಾಂಗ್ರೆಸ್ ನ ಪ್ರಮುಖರಿಗೆ ಸನ್ಮಾನ ಕಾರ್ಯಕ್ರಮ ‌ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆಯಿತು.

ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ ಮ್ಯಾನ್ ಬಂಟ್ವಾಳ್, ಇಂಡಿಯನ್ ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಶೆಟ್ಟಿ, ಯೂತ್ ಕಾಂಗ್ರೆಸ್ ರಾಜ್ಯ ಸೆಕ್ರೆಟರಿ ಮೆರಿಲ್ ರೇಗೋ ಅವರನ್ನ ಕಾಂಗ್ರೆಸ್ ನ ಪ್ರಮುಖರು ಸನ್ಮಾನಿಸಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಪಕ್ಷದಲ್ಲಿ ಇದೀಗ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಸಂಘಟನೆ ಜವಾಬ್ದಾರಿಯನ್ನ ಉತ್ತಮವಾಗಿ ನಿರ್ವಹಿಸುವಂತೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಎಂಎಲ್ಸಿ ಹರೀಶ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಮೊದಲಾದ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. ಜೊತೆಗೆ ವಿವಿಧ ಅನಿವಾಸಿ ಭಾರತೀಯ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಹಿತೈಷಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Share.

1 Comment

  1. This design is wicked! You obviously know how to keep a reader amused. Between your wit and your videos, I was almost moved to start my own blog (well, almost…HaHa!) Great job. I really loved what you had to say, and more than that, how you presented it. Too cool!

Leave A Reply