ಮಂಗಳೂರು: ಪತ್ನಿ ಮೃತಪಟ್ಟಿದ್ದಾಳೆ ಎಂದು ನಕಲಿ ಪ್ರಮಾಣಪತ್ರ ತಯಾರಿಸಿ ಜೀವವಿಮಾ ಪಾಲಿಸಿಯ ಹಣ ಪಡೆದ ವ್ಯಕ್ತಿಗೆ ಮೂರುವರೆ ವರ್ಷ ಜೈಲು ಶಿಕ್ಷೆ ಹಾಗು 10 ಸಾವಿರ ರೂ. ದಂಡ ವಿಧಿಸಿ 2ನೇ ಸಿಜೆಎಂ ನ್ಯಾಯಾಲಯವು ತೀರ್ಪು ನೀಡಿದೆ.

ಶಿವರಾಮ ಶೆಣೈ (55) ಅಪರಾಧಿ. ಈತ ನಗರದ ಕೆಎಸ್. ರಾವ್ ರಸ್ತೆಯ ಪಾಪ್ಯುಲರ್ ಬಿಲ್ಡಿಂಗ್‌ನಲ್ಲಿರುವ ಜೀವವಿಮಾ ಕಚೇರಿಯಲ್ಲಿ ತನ್ನ ಪತ್ನಿ ಸುಮನಾ ಶೆಣೈ ಹೆಸರಿನಲ್ಲಿ ಇದ್ದ 2 ಎಲ್‌ಐಸಿ ಪಾಲಿಸಿಗಳಿಗೆ ತನ್ನನ್ನು ನಾಮ ನಿರ್ದೇಶಿತ ವ್ಯಕ್ತಿಯನ್ನಾಗಿ ಮಾಡಿಕೊಂಡಿದ್ದ. ಪತ್ನಿ ಜೀವಂತ ಇರುವಾಗಲೇ 20.8.2008ರಂದು ಮೃತಪಟ್ಟಿರುವುದಾಗಿ ನಕಲಿ ಪ್ರಮಾಣಪತ್ರ ತಯಾರಿಸಿ 2 ಪಾಲಿಸಿಗಳಿಂದ ಒಟ್ಟು 3,96,922 ರೂ. ಹಣವನ್ನು ಚೆಕ್ ಮೂಲಕ ಪಡೆದುಕೊಂಡಿದ್ದ. ಬಳಿಕ ಆ ಹಣವನ್ನು ತನ್ನ ಹಾಗೂ ಭಾರತಿ ಯಾನೆ ಭಾಗ್ಯಲಕ್ಷ್ಮಿ ಎಂಬವರ ಜಂಟಿ ಖಾತೆಗೆ ಹಾಕಿ ನಗದೀಕರಿಸಿಕೊಂಡಿದ್ದ. ಈ ಬಗ್ಗೆ ಆಗಿನ ಜೀವ ವಿಮಾ ನಿಗಮದ ಶಾಖಾ ಮ್ಯಾನೇಜರ್ ಗಣೇಶ್ ಕಾಮತ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2ನೇ ಆರೋಪಿ ಭಾರತಿ ಯಾನೆ ಭಾಗ್ಯಲಕ್ಷ್ಮೀ ತಲೆಮರೆಸಿಕೊಂಡಿರುವುದರಿಂದ ಆಕೆಯ ವಿರುದ್ಧದ ಪ್ರಕರಣವನ್ನು ಬೇರ್ಪಡಿಸಲಾಗಿದೆ. ಸರ್ಕಾರದ ಪರವಾಗಿ ಮೋಹನ್ ಕುಮಾರ್ ಬಿ. ವಾದಿಸಿದ್ದರು.
1 Comment
Undeniably believe that which you said. Your favorite justification appeared to
be on the net the simplest thing to be aware of.
I say to you, I definitely get annoyed while people think about worries that they
just do not know about. You managed to hit the nail upon the top as well as defined out the whole thing without having side-effects , people can take a signal.
Will probably be back to get more. Thanks