ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆ ಗ್ರಾಮದಲ್ಲಿ ಶಿವಾಜಿ ಪ್ರತಿಮೆ ಬಳಿ ಇರುವ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ ಮುಂಭಾಗದದಲ್ಲಿ ಮೈಕ್ ಅಳವಡಿಸಿ, ಬೆಳಗ್ಗೆ 5 ಗಂಟೆಯಿಂದ 6 ಗಂಟೆಯವರೆಗೆ ಕೊರಗಜ್ಜನ ಭಕ್ತಿ ಗೀತೆಗಳನ್ನು ಹಾಕಲಾಗಿದೆ.
ಮೂಡುಶೆಡ್ಡೆ ಮಸೀದಿಯಿಂದ ಸುಮಾರು 250 ಮೀಟರ್ ದೂರದಲ್ಲಿದೆ. ಈ ಸಂದರ್ಭದಲ್ಲಿ ಅಯ್ಯಪ್ಪ ಭಕ್ತ ವೃಂದದ ಬಳಿ ಇಬ್ಬರು ಶ್ರೀ ರಾಮ ಸೇನೆಯ ಕಾರ್ಯಕರ್ತರಿದ್ದರು. ಇದರ ನೇತೃತ್ವವನ್ನು ಶ್ರೀ ರಾಮಸೇನೆಯ ಜಿಲ್ಲಾಧ್ಯಕ್ಷ ಪ್ರದೀಪ್ ಮೂಡುಶೆಡ್ಡೆ ವಹಿಸಿದ್ದಾರೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುಪ್ರಭಾತಕ್ಕೆ ಚಾಲನೆ ನೀಡಿ ಮಾತಾಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು, ಮೈಕ್ ಹಾಕುವ ದೇವಸ್ಥಾನಗಳಿಗೆ ನೋಟಿಸ್ ನೀಡುತ್ತಿದ್ದಾರೆ. ಆದರೆ ಮಸೀದಿಗೆ ಯಾಕೆ ಕೊಡಲ್ಲ. ಈ ರೀತಿ ಮಾಡುತ್ತಿರುವ ಸರ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಮಸೀದಿ ಮೇಲಿನ ಮೈಕ್ ತೆಗೆಸಲು ಸರ್ಕಾರಕ್ಕೆ ಗಡುವು ನೀಡಿದ್ದೆವು. ಆದರೆ ಸರ್ಕಾರ ಈ ಬಗ್ಗೆ ಕ್ರಮ ಜರುಗಿಸಲಿಲ್ಲ. ಹೀಗಾಗಿ ದೇವಾಲಯಗಳಲ್ಲಿ ಸುಪ್ರಭಾತಕ್ಕೆ ಚಾಲನೆ ನೀಡಿದ್ದೇವೆ. ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಇರಲಿ. ಮುಸ್ಲಿಮರ ಸೊಕ್ಕು, ಹಠದಿಂದ ಜನರಿಗೆ ತೊಂದರೆ ಆಗುತ್ತಿದೆ. ಇದು ತಾಲಿಬಾನ್ ಅಲ್ಲ, ಪಾಕಿಸ್ತಾನವಲ್ಲ. ಈ ರೀತಿ ಹಠ ಸರಿಯಲ್ಲ. ಸಂಘರ್ಷಕ್ಕೆ ನೀವೇ ಅವಕಾಶ ಮಾಡಿ ಕೊಡುತ್ತಿದ್ದೀರಿ. ಈ ಆಂದೋಲನ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
2 Comments
Avalide magellan rx pharmacy network
pharmacy schools online online pharmacy coupon