ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಅರೆಬೈಲು ತೋಳಾರ್ ಎಂಬಲ್ಲಿ ಕಳೆದ ಹಲವು ದಿನಗಳಿಂದ ಮಾವಿನ ತೋಪಿನಲ್ಲಿ ಓಡಾಡುತ್ತಿದ್ದ ಚಿರತೆಯನ್ನು ಕುಂದಾಪುರ ಅರಣ್ಯಾ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆ ಹಿಡಿದಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಮಾವಿನ ತೋಪಿನಲ್ಲಿ ಚಿರತೆಯೊಂದು ಸಂಚರಿಸುತ್ತಿತ್ತು, ಇದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಸುಮಾರು ಒಂದು ತಿಂಗಳ ಕಾಲ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಎರಡೂವರೆ ವರ್ಷದ ಹೆಣ್ಣು ಚಿರತೆಯೊಂದು ಸೆರೆ ಹಿಡಿದಿದ್ದಾರೆ.
ಗ್ರಾ.ಪಂ.ಮಾಲಾಡಿ, ಸುಳಿಗುಂಡಿ ಹಾಗೂ ಅಸೋಡು ಪರಿಸರದಲ್ಲಿ ಕಪ್ಪು ಚಿರತೆ ಸಂಚಾರವಿದೆ ಎನ್ನುವ ಅನುಮಾನಗಳು ವ್ಯಕ್ತವಾಗಿದೆ. ಪರಿಸರದಲ್ಲಿರುವ ನಾಯಿ ಮರಿಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಪ್ರಸ್ತುತ ಸ್ಥಳೀಯರು ಆತಂಕದಿಂದ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.