ಮಂಗಳೂರು: ನಗರದ ಜೆಪ್ಪಿನಮೊಗರು ಬಳಿ ಅಪರಿಚಿತ ವಾಹನ ಢಿಕ್ಕಿ ಹೊಡೆದು ರಸ್ತೆಬದಿಯಲ್ಲಿ ಹುಲ್ಲು ಕಟಾವ್ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬಿಹಾರ ಜಾಮೂಲ್ ನಿವಾಸಿ ವಿಕ್ಕಿ ಖಾನ್(23) ಎಂದು ಗುರುತಿಸಲಾಗಿದೆ. ಸಾಸ್ತಾನ ನಿವಾಸಿ ಗೋಪಾಲ ಪೂಜಾರಿ ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಕ್ಕಿ ಖಾನ್ ಮತ್ತು ಗೋಪಾಲ ಪೂಜಾರಿ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವ್ ಮಾಡುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ವಾಹನದ ಮೇಲೆ ಸಂಶಯ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಈ ಬಗ್ಗೆ ನಾಗುರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
1 Comment
buy ivermectin 3mg tablets Cialis Standard Dosage