ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಪ್ರಕರಣದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲದಲ್ಲಿ ಗ್ಯಾಸ್ ಸ್ಟವ್ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತ ವಯಸ್ಸಿನ ಯುವಕನನ್ನು (ಆರೋಪಿ) ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಈ ಹಿಂದೆ ಹರೀಶ್ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಗಲಾಟೆ ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ ಹರೀಶ್ ಗಾಣಿಗ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಆರೋಪಿ ಮಂಗಳವಾರ ಹರೀಶ್ ಅವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದನು.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಮೋಗವೀರ ಪಟ್ಟಣದಲ್ಲಿ ಬಂಧಿಸಿದ್ದಾರೆ.