ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸ್ಪೋಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ, ಮಂಗಳೂರು ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶನಿವಾರದಿಂದ 10 ದಿನ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ.
ಹೌದು, ಕೊರೊನಾ ಸೋಂಕು ಆರ್ಭಟಿಸುತ್ತಿರುವ ಎಂಟು ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ, ಉಡುಪಿ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್ , ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇದೇ ಶನಿವಾರದಿಂದ ನೈಟ್ ಕರ್ಪ್ಯೂ ಜಾರಿಗೊಳಿಸಿ ಸಿಎಂ ಆದೇಶ ಹೊರಡಿಸಿದ್ದಾರೆ.
ದೇಶದಲ್ಲಿರುವ ಕರೋನ ಪರಿಸ್ಥಿತಿ ಕುರಿತು ಪಿಎಂ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸಿದರು. ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ರು. ಈ ಸಂದರ್ಭದಲ್ಲಿ ರಾಜ್ಯಗಳ ರಾತ್ರಿ ನಿರ್ಬಂಧಕ್ಕೆ (ಕೊರೊನಾ ಕರ್ಫ್ಯೂ) ಪ್ರಧಾನಿ ಮೋದಿ ಬೆಂಬಲ ನೀಡಿದ್ದು, ರಾತ್ರಿ 9 ಗಂಟೆಗೆ ‘ಕೊರೊನಾ ಕರ್ಫ್ಯೂ’ ಪ್ರಾರಂಭವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು.
ರಾತ್ರಿ 9 ರಿಂದ ಇಲ್ಲವೇ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿ ಎಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಕರ್ನಾಟಕದಲ್ಲಿ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ. ರಾಜ್ಯದ ಜನತೆ ನೈಟ್ ಕರ್ಪ್ಯೂ ವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಮನೆಯಿಂದ ಹೊರಗಡೆ ಬರಬಾರದು ಎಂದು ಸಿಎಂ ಯಡಿಯೂರಪ್ಪ ಕಟ್ಟು ನಿಟ್ಟಾಗಿ ಸೂಚನೆ ನೀಡಿದ್ದಾರೆ.