ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಕೋವಿಡ್ -19 ಸೋಂಕು ಪಾಸಿಟಿವ್ ದೃಢವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಸದ್ಯ ಹತ್ತು ಮಂದಿ ಪೊಲೀಸರಿಗೆ ಸೋಂಕು ದೃಢವಾಗಿದೆ. ಅವರಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಐಸೊಲೇಷನ್ ಅಲ್ಲಿದ್ದಾರೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಸಿಬ್ಬಂದಿಗೆ ಖುದ್ದು ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದೇನೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.