ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ತುಂಬೆ ಡ್ಯಾಮ್ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜದ ಬಣ್ಣಗಳ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ಹಾಗೂ ಡಾ.ವೈ.ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮನಾಪ ಮೇಯರ್ ಪ್ರೇಮಾನಂದ ಶೆಟ್ಟಿಯವರ ಮುತುವರ್ಜಿಯಲ್ಲಿ ತ್ರಿವರ್ಣ ಧ್ವಜದ ಬಣ್ಣದ ಬೆಳಕು ಗಮನ ಸೆಳೆಯುತ್ತಿದೆ. ಸಾರ್ವಜನಿಕರು ಅಗಸ್ಟ್ 13ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6ರಿಂದ 9ರ ವರೆಗೆ ಈ ತ್ರಿವರ್ಣ ಬೆಳಕನ್ನು ವೀಕ್ಷಣೆ ಮಾಡಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.
1 Comment
Nephrotic syndrome with albuminuria d. stromectol 3 mg tablets price