ಮಂಗಳೂರು: ಸ್ಯಾಂಡಲ್‍ವುಡ್ ನಟ ವಿಜಯ್ ರಾಘವೇಂದ್ರ ಕುಟುಂಬ ಸಮೇತರಾಗಿ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಇಂದು ಭೇಟಿ ನೀಡಿದ್ದಾರೆ.

ಈ ವೇಳೆ ದೇವಿಗೆ ಸೀರೆ ಕಾಣಿಕೆ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾರಿಗೆ ಕ್ಷೇತ್ರದ ಪ್ರಧಾನ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಪ್ರಸಾದ ನೀಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ದೇಗುಲಕ್ಕೆ ಬಂದಿದ್ದ ಭಕ್ತರು, ಶಾಲಾ ವಿದ್ಯಾರ್ಥಿಗಳು ವಿಜಯ್ ರಾಘವೇಂದ್ರ ಜೊತೆಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ಬಳಿಕ ನಟ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ವೇಳೆ ಅರ್ಚಕ ರಾಮದಾಸ ಆಚಾರ್ಯ ಅನಂತಕೃಷ್ಣ ಆಚಾರ್ಯ, ವ್ಯವಸ್ಥಾಪನಾ ಸಮಿತಿಯ ರವೀಂದ್ರ ಎಚ್ ಶೆಟ್ಟಿ, ರಘುವೀರ ಶೆಣೈ, ರವಿಶಂಕರ ಪೈ ಮತ್ತಿತರು ಉಪಸ್ಥಿತರಿದ್ದರು.

ಇದೇ ವೇಳೆ ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರಕ್ಕೂ ವಿಜಯ್ ರಾಘವೇಂದ್ರ ಕುಟುಂಬ ಸಮೇತ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

 

 

 

Share.

Leave A Reply