ಪಾಂಡಿಚೇರಿ: ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್-ಡಿಎಂಕೆ ಸರ್ಕಾರ ವಿಶ್ವಾಸಮತವನ್ನು ಕಳೆದುಕೊಂಡ ನಂತರ ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಸದನದಲ್ಲಿ ವಿಶ್ವಾಸಮತ ಕಳೆದುಕೊಂಡ ನಂತರ ನಾರಾಯಣಸ್ವಾಮಿ, ಲೆಫ್ಟಿನೆಂಟ್ ಗವರ್ನರ್ ತಮಿಳ್‍ಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿ ಸಚಿವ ಸಂಪುಟದೊಂದಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಮುಂದಿನ ಮೂರು ತಿಂಗಳ ಅವಧಿಗೆ ಸರ್ಕಾರ ರಚಿಸಲು ಪ್ರತಿಪಕ್ಷಗಳನ್ನು ಆಹ್ವಾನಿಸಬೇಕೇ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆ ಎಂಬುದನ್ನು ಇದೀಗ ಲೆಫ್ಟಿನೆಂಟ್ ಗವರ್ನರ್ ನಿರ್ಧರಿಸಲಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿ ಜೂನ್ 8 ಕ್ಕೆ ಕೊನೆಗೊಳ್ಳಬೇಕಿತ್ತು.

ಈ ವೇಳೆ ಮಾತನಾಡಿದ ನಾರಾಯಣಸ್ವಾಮಿ, ಮಾಜಿ ಲೆಫ್ಟಿನೆಂಟ್​ ಗವರ್ನರ್ ಕಿರಣ್ ಬೇಡಿ ಮತ್ತು ಕೇಂದ್ರ ಸರ್ಕಾರ ವಿಪಕ್ಷಗಳ ಜೊತೆ ಸೇರ್ಕೊಂಡ್​ ಸರ್ಕಾರವನ್ನ ಬೀಳಿಸಿದ್ರು, ‘ಜನರಿಂದ ತಿರಸ್ಕಾರಕ್ಕೊಳಗಾದವರು ನಮ್ಮ ಸರ್ಕಾರವನ್ನು ಉರುಳಿಸಲು ಸಂಚು ನಡೆಸಿದ್ದಾರೆ. ಬಿಜೆಪಿ ಹಣ ಬಲದಿಂದ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದೆ. ಜತೆಗೆ, ಇ.ಡಿ. ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ಬಳಸಿಕೊಂಡು ಶಾಸಕರು ಮತ್ತು ಸಚಿವರಿಗೆ ಬೆದರಿಕೆ ಹಾಕುತ್ತಿದೆ. ಸ್ಪೀಕರ್ ತೀರ್ಪು ತಪ್ಪಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ, ಎಐಎಡಿಎಂಕೆ ಪಕ್ಷಗಳು ಮೂವರು ನಾಮನಿರ್ದೇಶಿತ ಸದಸ್ಯರನ್ನು ಬಳಸಿಕೊಂಡು ನಮ್ಮ ಸರ್ಕಾರವನ್ನು ಉರುಳಿಸುವಲ್ಲಿ ಯಶಸ್ವಿಯಾಗಿವೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಪುದುಚೇರಿ ಮತ್ತು ಈ ದೇಶದ ಜನರು ಅವರಿಗೆ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

 

Share.

2 Comments

  1. I was planted by a friend. This fake bangs is really super*true, and it is completely integrated with my own hair color, and the length and hair volume are quite suitable. This price can be used to wear a wear without worrying about cutting the bangs~

  2. I together with my friends were actually analyzing the good advice located on your website and unexpectedly came up with a horrible suspicion I had not expressed respect to the site owner for those secrets. The young boys were as a consequence happy to read them and now have pretty much been having fun with those things. Thank you for indeed being very thoughtful and then for having these kinds of helpful information most people are really needing to be informed on. Our sincere apologies for not expressing gratitude to you earlier.

Leave A Reply