ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶುಕ್ರವಾರ ಸಂಜೆ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿ ದ್ದು, ಈ ಬೆನ್ನಲ್ಲೇ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ( ಸಿಐಎಸ್‌ಎಫ್) ದೇಶಾದ್ಯಂತ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ.
ದೆಹಲಿ ಎಪಿಜೆ ಅಬ್ದುಲ್ ಕಲಾಂ ರಸ್ತೆಯ ಬಳಿ ಸ್ಪೋಟ ಸಂಭವಿಸಿದ್ದು, ಘಟನ ಸಮೀಪದಲಿದ್ದ ಹಲವು ಕಾರುಗಳ ವಿಂಡ್ ಸ್ಕ್ರೀನ್ ಗಳಿಗೆ ಹಾನಿಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆ ಪ್ರಮುಖ ಕೇಂದ್ರಗಳು ಮತ್ತು ಸರ್ಕಾರಿ ಕಟ್ಟಡ ಬಳಿ ಎಚ್ಚರಿಕೆ ವಹಿಸಲು ನೀಡಲಾಗಿದೆ. ಅಲ್ಲದೇ ಹೆಚ್ಚಿನ ಭದ್ರತೆ ಒದಗಿಸುವಂತೆ ಸಿ ಐ ಎಸ್ ಎಫ್ ಆದೇಶ ನೀಡಿದೆ.
ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಕಾರಣ ವಿರಬಹುದು ಎಂದು ಶಂಕಿಸಲಾಗಿದೆ. ರಾಯಭಾರ ಕಚೇರಿಯಿಂದ 40-50 ಮೀಟರ್ ದೂರದಲ್ಲಿರುವ ಜಿಂದಾಲ್ ಮನೆಯಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ದೆಹಲಿ ಪೊಲೀಸರ ವಿಶೇಷ ಸೆಲ್, ಕ್ರೈಂ ಬ್ರಾಂಚ್ ನ ಅಧಿಕಾರಿಗಳು ಸೇರಿದಂತೆ ಗುಪ್ತಚರ ವಿಭಾಗದ ಹಲವು ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ, ಸ್ಫೋಟದ ತನಿಖೆ ನಡೆಸಿದ್ದಾರೆ.