ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪಶ್ಚಿಮ ಬಂಗಾಳ ಮೂಲದ ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯ್ ವರ್ಗಿಯ ಅವರನ್ನು ನಿನ್ನೆ ರಾತ್ರಿ ಭೇಟಿ ಮಾಡಿದ ನಂತರ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆ ಖಚಿತಗೊಂಡಿದೆ.
ಪಶ್ಚಿಮ ಬಂಗಾಳದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಿಥುನ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಘೋಶ್ ಮಿಥನ್ ಚಕ್ರವರ್ತಿಯನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ. ಕೋಲ್ಕತ್ತಾದಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸಲಿರುವ ಬೃಹತ್ ಚುನಾವಣಾ ರ್ಯಾಲಿಯಲ್ಲಿ ಮಿಥುನ್ ಚಕ್ರವರ್ತಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಮಾ.27ರಿಂದ ಪಶ್ಚಿಮ ಬಂಗಾಳಕ್ಕೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಶತಾಯ-ಗತಾಯ ದೀದಿ ಆಡಳಿತಕ್ಕೆ ಅಂತ್ಯ ಹಾಡಲು ಸಿದ್ಧತೆ ಮಾಡಿಕೊಂಡಿರುವ ಬಿಜೆಪಿಗೆ ಮಿಥುನ್ ಚಕ್ರವರ್ತಿ ಸೇರ್ಪಡೆಯಿಂದ ಆನೆಬಲ ಬಂದಂತಾಗಿದೆ.
ಈಗಾಗಲೇ ತೃಣಮೂಲ ಕಾಂಗ್ರೆಸ್‍ನ ಹಲವಾರು ಶಾಸಕರು ಹಾಗೂ ಸಚಿವರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳದ ಘಟಾನುಘಟಿ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
1 Comment
The crux of your writing while sounding agreeable at first, did not really work properly with me after some time. Somewhere within the paragraphs you were able to make me a believer unfortunately just for a while. I still have a problem with your leaps in assumptions and you might do well to help fill in those breaks. If you actually can accomplish that, I could certainly be fascinated.