ನವದೆಹಲಿ: ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು. ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಹೇಳಿದರು.

‘ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನ. ಈ ಕರ್ತವ್ಯದ ಹಾದಿಯಲ್ಲಿ ಜೀವ ನೀಡಿದ ಬಾಪು, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್ ಅವರಿಗೆ ನಾಗರಿಕರು ಕೃತಜ್ಞತೆ ಸಲ್ಲಿಸುತ್ತೇನೆ. ಅಂತೆಯೇ ಮಂಗಲ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಸುಖದೇವ್, ರಾಜಗುರು, ಚಂದ್ರಶೇಖರ್ ಆಜಾದ್, ಅಶ್ಫಾಕುಲ್ಲಾ ಖಾನ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಬ್ರಿಟಿಷರ ಆಳ್ವಿಕೆಯ ಬುನಾದಿ ಬುಡಮೇಲು ಮಾಡಿದ ನಮ್ಮ ಅಸಂಖ್ಯಾತ ಕ್ರಾಂತಿಕಾರಿಗಳಿಗೆ ಈ ರಾಷ್ಟ್ರ ಕೃತಜ್ಞವಾಗಿದೆ.
‘ಆಜಾದಿ ಮಹೋತ್ಸವ’ದ ಸಂದರ್ಭದಲ್ಲಿ ನಾವು ನಮ್ಮ ಅನೇಕ ರಾಷ್ಟ್ರನಾಯಕರನ್ನು ಸ್ಮರಿಸಿದ್ದೇವೆ. ಆಗಸ್ಟ್ 14 ರಂದು, ನಾವು ವಿಭಜನೆಯ ಭೀಕರತೆಯನ್ನು ನೆನಪಿಸಿಕೊಂಡಿದ್ದೇವೆ. ಕಳೆದ 75 ವರ್ಷಗಳಲ್ಲಿ ನಮ್ಮ ದೇಶವನ್ನು ಮುನ್ನಡೆಸಲು ಕೊಡುಗೆ ನೀಡಿದ ದೇಶದ ಎಲ್ಲಾ ನಾಗರಿಕರನ್ನು ಇಂದು ನೆನಪಿಸಿಕೊಳ್ಳುವ ದಿನವಾಗಿದೆ. ರಾಣಿ ಲಕ್ಷ್ಮೀಬಾಯಿ, ಝಲ್ಕರಿ ಬಾಯಿ, ಚೆನ್ನಮ್ಮ, ಬೇಗಂ ಹಜರತ್ ಮಹಲ್ ಆಗಿರಲಿ, ಭಾರತದ ಮಹಿಳೆಯರ ಶಕ್ತಿಯನ್ನು ನೆನಪಿಸಿಕೊಂಡಾಗ ಪ್ರತಿ ಭಾರತವೂ ಹೆಮ್ಮೆಯಿಂದ ತುಂಬುತ್ತದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಅಥವಾ ದೇಶವನ್ನು ಕಟ್ಟಿದವರು -ಡಾ ರಾಜೇಂದ್ರ ಪ್ರಸಾದ್, ನೆಹರೂ ಜಿ, ಸರ್ದಾರ್ ಪಟೇಲ್, ಎಸ್ಪಿ ಮುಖರ್ಜಿ, ಎಲ್ಬಿ ಶಾಸ್ತ್ರಿ, ದೀನದಯಾಳ್ ಉಪಾಧ್ಯಾಯ, ಜೆಪಿ ನಾರಾಯಣ್, ಆರ್ಎಂ ಲೋಹಿಯಾ, ವಿನೋಬಾ ಭಾವೆ, ನಾನಾಜಿ ದೇಶಮುಖ್, ಸುಬ್ರಮಣ್ಯ ಭಾರತಿ. ಅಂತಹ ಮಹಾನ್ ವ್ಯಕ್ತಿಗಳ ಮುಂದೆ ತಲೆಬಾಗುತ್ತೇವೆ ಎಂದರು.
ಅಂತೆಯೇ ‘ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದೆ ಮತ್ತು ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ. ನಮ್ಮ ದೇಶದ ಜನರು ಅನೇಕ ಪ್ರಯತ್ನಗಳನ್ನು ಮಾಡಿದರು. ಆದರೆ ಅವರು ಎಂದೂ ತಮ್ಮ ಸಂಕಲ್ಪ ಬಿಡಲಿಲ್ಲ ಮತ್ತು ಅವರ ಸಂಕಲ್ಪಗಳ ಕಾರ್ಯಸಾಧನೆಗೆ ನಿರತಂರವಾಗಿ ಶ್ರಮಿಸಿದರು. ಅದನ್ನು ಮಸುಕಾಗಲು ಬಿಡಲಿಲ್ಲ. ನಾವು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವಾಗ, ನಾವು ಬುಡಕಟ್ಟು ಸಮುದಾಯವನ್ನು ಮರೆಯಲು ಸಾಧ್ಯವಿಲ್ಲ. ಭಗವಾನ್ ಬಿರ್ಸಾ ಮುಂಡಾ, ಸಿಧು-ಕನ್ಹು, ಅಲ್ಲೂರಿ ಸೀತಾರಾಮ ರಾಜು, ಗೋವಿಂದ್ ಗುರು – ಸ್ವಾತಂತ್ರ್ಯ ಹೋರಾಟದ ಧ್ವನಿಯಾದ ಅಸಂಖ್ಯಾತ ಹೆಸರುಗಳು ಮತ್ತು ಬುಡಕಟ್ಟು ಸಮುದಾಯವನ್ನು ಮಾತೃಭೂಮಿಗಾಗಿ ಬದುಕಲು ಮತ್ತು ಸಾಯಲು ಪ್ರೇರೇಪಿಸಿದರು ಎಂದರು.

1 Comment
Hello, Neat post. There is a problem along with your site in internet explorer, might check this?K IE nonetheless is the marketplace leader and a huge element of folks will miss your wonderful writing due to this problem.