ಬೆಂಗಳೂರು: ಡ್ರಗ್ಸ್ ಪಾರ್ಟಿ ಮಾಡುತ್ತಿದ್ದ ಬೆಂಗಳೂರಿನ ಖಾಸಗಿ ಹೋಟೆಲ್ ಮೇಲೆ ಹಲಸೂರು ಪೊಲೀರು ದಾಳಿ ನಡೆಸಿದ್ದು, ಬಾಲಿವುಡ್ ನಟ ಶಕ್ತಿ ಕಪೂರ್ ಮಗ ಸಿದ್ಧಾಂತ್ ಕಪೂರ್ನನ್ನು ಬಂಧಿಸಿದ್ದಾರೆ.

ಹಲಸೂರು ಬಳಿಯ ಜಿ.ಟಿ ಮಾಲ್ ಮುಂಭಾಗದಲ್ಲಿರುವ ದಿ ಪಾರ್ಕ್ ಹೋಟೆಲ್ನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು, ಮಧ್ಯೆರಾತ್ರಿ ದಿಢೀರ್ ದಾಳಿ ನಡೆಸಿದ್ದಾರೆ.
ಸುಮಾರು 50ಕ್ಕೂ ಹೆಚ್ಚು ಯುವಕ ಯುತಿಯರನ್ನು ವಶಕ್ಕೆ ಪಡೆದಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ. ಈ ಪೈಕಿ ಸಿದ್ಧಾಂತ್ ಕಪೂರ್ ಸೇರಿದಂತೆ ಐವರು ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.
ಸದ್ಯ ಹಲಸೂರು ಪೊಲೀಸರು ಬಾಲಿವುಡ್ ನಟ ಸಿದ್ಧಾಂತ್ ಕಪೂರ್ನನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.