ಬೆಂಗಳೂರು: ಏಕಾಏಕಿ ತಮ್ಮ ಖಾತೆಯನ್ನು ಬದಲಾವಣೆ ಮಾಡಲು ತೀರ್ಮಾನಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿರ್ಧಾರದ ವಿರುದ್ಧ ಸೆಡ್ಡು ಹೊಡೆದಿರುವ ಆನಂದ್ ಸಿಂಗ್ ನಾಳೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ನಾಳೆ ಮಧ್ಯಾಹ್ನ ರಾಜಭವನಕ್ಕೆ ತೆರಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ಆನಂದ್ ಸಿಂಗ್ ರಾಜೀನಾಮೆ ಕೊಟ್ಟರೆ ಆಡಳಿತಾರೂಢ ಬಿಜೆಪಿಯಲ್ಲಿ ದೊಡ್ಡ ಅಲ್ಲೋಲ್ಲಕಲ್ಲೋಲ ಸೃಷ್ಟಿಯಾಗುವ ಸಾಧ್ಯತೆ ಇದೆ.

ಈ ಬೆಳವಣಿಗೆಗಳ ನಡುವೆಯೇ ಸಂಪುಟದಲ್ಲಿ ಸ್ಥಾನಮಾನ ಸಿಗದೆ ಕುದಿಯುತ್ತಿರುವ ಅಸಮಾಧಾನಿತ ಶಾಸಕರು ಗುರುವಾರ ಅಥವಾ ಶುಕ್ರವಾರ ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಕಳೆದ ವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಖಾತೆಯನ್ನು ಹಿಂಪಡೆದು ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿತ್ತು.
ಇದೀಗ ಬದಲಾದ ಪರಿಸ್ಥಿತಿಯಲ್ಲಿ ಆನಂದ್ ಸಿಂಗ್ ಅವರ ಖಾತೆಯನ್ನು ಮತ್ತೆ ಬದಲಾವಣೆ ಮಾಡಲು ತೀರ್ಮಾನಿಸಲಾಗಿದ್ದು, ಅವರಿಗೆ ಮೂಲಭೂತ ಸೌಕರ್ಯ, ಪರಿಸರ ಹಾಗೂ ಜೈವಿಕ ಪರಿಸರ ಖಾತೆಯನ್ನು ನೀಡಲು ಸಿಎಂ ತೀರ್ಮಾನಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ಬೇಸತ್ತಿರುವ ಆನಂದ್ ಸಿಂಗ್ ಈಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
5 Comments
browse tinder for free , tinder dating app https://tinderdatingsiteus.com/
I think this is one of the so much significant info for me.
And i’m happy reading your article. But should commentary on few common things, The web site taste is ideal, the articles
is in point of fact great : D. Excellent process, cheers
There is clearly a lot to know about this. I consider you made various good points in features also.
free online dating https://freedatingsiteall.com
free chat online singles free phone chat lines https://freedatingste.com/