ಗದಗ: ಮಲ್ಲಸಮುದ್ರ ಗ್ರಾಮದಲ್ಲಿ ಇಬ್ಬರ ಮೇಲೆ ಚೂರಿ ಇರಿತ ಪ್ರಕರಣ ಸಂಬಂಧ ಗದಗ ನಗರಕ್ಕೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ ಹಿನ್ನೆಲೆ ಗದಗ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಪ್ರಮೋದ್ ಮುತಾಲಿಕ್ಗೆ ನಿರ್ಬಂಧ ಹೇರಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಆಗಸ್ಟ್ 12ರ ಬೆಳಗ್ಗೆ 7 ಗಂಟೆಯಿಂದ ಆಗಸ್ಟ್ 14 ಮಧ್ಯರಾತ್ರಿವರಗೆ ಮುತಾಲಿಕ್ರನ್ನು ಗದಗ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ವೈಶ್ಯಾಲಿ ಆದೇಶ ಹೊರಡಿಸಿದ್ದಾರೆ. ಇನ್ನೂ ಚೂರಿ ಇರಿತ ಪ್ರಕರಣದಲ್ಲಿ ಶ್ರೀರಾಮಸೇನೆ ಕಾರ್ಯಕರ್ತ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದ್ದು, ಪ್ರಮುಖ ಆರೋಪಿ ಶ್ರೀರಾಮಸೇನೆ ಕಾರ್ಯಕರ್ತ ಸೋಮು ಗುಡಿನನ್ನು ಪೊಲೀಸರು ಬಂಧಿಸಿದ್ದಾರೆ.