ನವದೆಹಲಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದ್ದು, ರಾಜ್ಯಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದೆ.

ರಾಜ್ಯಸಭೆ ವಿರೋಧಪಕ್ಷದ ನಾಯಕರಾಗಿದ್ದ ಗುಲಾಮ್ ನಬೀ ಆಜಾದ್ ಅವರ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಖರ್ಗೆ ಹೆಸರನ್ನು ಸೂಚಿಸಲಾಗಿದ್ದು, ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದೆ.

ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದ್ದು, ರಾಜ್ಯಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ನಿವೃತ್ತರಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ವಿದಾಯ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಗುಲಾಂ ನಬಿ ಆಜಾದ್ ಬಗ್ಗೆ ಪ್ರಸ್ತಾಪಿಸುವಾಗ ಭಾವುಕರಾದರು. ಆಜಾದ್ ಅವರ ಕೊಡುಗೆಯನ್ನು ಶ್ಲಾಘಿಸಿದ್ದರು.

ಸದಸ್ಯತ್ವದಿಂದ ನಿವೃತ್ತಿಯಾಗುತ್ತಿರುವ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ವಿದಾಯ ಭಾಷಣ ಮಾಡಿದ ಗುಲಾಂ ನಬಿ ಆಜಾದ್, ‘ಪಾಕಿಸ್ತಾನಕ್ಕೆ ತೆರಳದ ಅದೃಷ್ಟವಂತರಲ್ಲಿ ನಾನೂ ಒಬ್ಬ. ಪಾಕಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಓದಿದಾಗ, ನಾನೊಬ್ಬ ಹಿಂದುಸ್ತಾನಿ ಮುಸ್ಲಿಮನಾಗಿರುವುದಕ್ಕೆ ಹೆಮ್ಮೆಯಿದೆ’ ಎಂದು ಹೇಳಿದ್ದರು. ‘ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನನಗೆ ಜನರ ಪ್ರೀತಿ ದೊರೆತಿದೆ’ ಎಂದು ತಿಳಿಸಿದ್ದರು.

Share.

Leave A Reply