ಬೆಂಗಳೂರು: ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ದೇಶದಲ್ಲಿ ಕೊರೋನಾ ಹಾವಳಿ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೋಸ್ಕರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೊರೋನಾ ತಡೆಗೆ ಮಾರ್ಗಸೂಚಿ

* ಕರ್ನಾಟಕಕ್ಕೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ.
* ಕೊರೋನಾ ವರದಿ ಇದ್ದರೆ ಮಾತ್ರ ಬಸ್ ಟಿಕೆಟ್ ನೀಡಬೇಕು.
* ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿದ್ದರೆ ಕೊರೋನಾ ವರದಿ ನೋಡಿ ಬಸ್ ಹತ್ತಿಸಿಕೊಳ್ಳಬೇಕು.
* ವಿಮಾನ ಪ್ರಯಾಣಿಕರು ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಂಡು ಬರಬೇಕು.
* ರೈಲು ಪ್ರಯಾಣಿಕರ ಬಳಿ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರಯಾಣಕ್ಕೆ ಅವಕಾಶ.
* ಸ್ವಂತ/ಬಾಡಿಗೆ ವಾಹನಗಳಲ್ಲಿ ಬರುವವರಿಗೆ ಟೋಲ್ ಗೇಟ್ ಗಳಲ್ಲಿ ರ್ಯಾಂಡಮ್ ಟೆಸ್ಟ್ ಕಡ್ಡಾಯ.
* ಕೊರೋನಾ ವರದಿ ಇದ್ದರೆ ಮಾತ್ರ ರಾಜ್ಯದ ಹೋಟೆಲ್, ಲಾಡ್ಜ್ ಗಳಲ್ಲಿ ರೂಂ.
* ಎರಡು ವಾರಗಳಲ್ಲಿ ಉಭಯ ರಾಜ್ಯಗಳಿಂದ ಬಂದಿರುವ ವಿದ್ಯಾರ್ಥಿಗಳು, ಉದ್ಯಮಿಗಳು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಬೇಕು.

 

Share.

3 Comments

  1. You can certainly see your skills within the work you write. The world hopes for more passionate writers such as you who aren’t afraid to mention how they believe. At all times go after your heart. “We may pass violets looking for roses. We may pass contentment looking for victory.” by Bern Williams.

Leave A Reply