ಉಡುಪಿ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ. ಬೆಳಗ್ಗೆಯಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ. ತಿಂಗಳಾಂತ್ಯದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ನಾಲ್ಕು ದಿನದಿಂದ ಮುಂಗಾರಿನ ಅಬ್ಬರ ಕ್ಷೀಣವಾಗಿತ್ತು. ಜಿಲ್ಲೆಯ ಕೆಲವೆಡೆ ತುಂತುರು ಮಳೆ ಸುರಿಯುತ್ತಿತ್ತು. ಇಂದು ಮುಂಜಾನೆಯಿಂದ ಜಿಲ್ಲೆಯಾದ್ಯಂತ ವರ್ಷಧಾರೆ ಆಗುತ್ತಿದೆ. ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿದಿದೆ.
ಇಂದು ಮುಂಜಾನೆಯಿಂದಲೇ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದೆ. ನಗರದ ಹೊರಭಾಗದಲ್ಲೂ ನಿರಂತರ ಮಳೆಯಾಗುತ್ತಿದೆ. ಜಿಲ್ಲೆಯ ಕರಾವಳಿ ತಾಲೂಕುಗಳಾಗಿರುವ ಕಾಪು, ಉಡುಪಿ, ಕುಂದಾಪುರ, ಬೈಂದೂರಿನಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಸಹ ಬಿರುಸಿನ ಮಳೆ ಸುರಿಯುತ್ತಿದ್ದು, ಕಾರ್ಕಳ, ಕುಂದಾಪುರ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ.
ಬೇಸಾಯಗಾರರು ಈಗಾಗಲೇ ಬಿತ್ತನೆ, ನಾಟಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಈ ವರ್ಷ ಸಮ ಪ್ರಮಾಣದ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಸೂಚನೆ ಪ್ರಕಾರ ತಿಂಗಳ ಅಂತ್ಯದವರೆಗೂ ಜಿಲ್ಲೆಯಲ್ಲಿ ಮಳೆ ಆಗಲಿದೆ.
5 Comments
Hi there, I enjoy reading through your article post.
I like to write a little comment to support you.
Because the admin of this site is working, no question very shortly it will be well-known, due to its feature contents.
Yes! Finslly something about pj daniels.
Quality articles or reviews is the main to interest the viewers to
pay a quick visit the web site, that’s what
this site is providing.
Hi there, I discovered your blog by way of Google while looking for a related topic, your web site got here up,
it appears to be like great. I’ve bookmarked it in my google bookmarks.
Hi there, just become aware of your weblog via Google, and
located that it’s really informative. I am going to watch out for brussels.
I’ll be grateful when you continue this
in future. Numerous people might be benefited out of your writing.
Cheers!